ಸುದ್ದಿ ಲೈವ್/ಶಿವಮೊಗ್ಗ
ಪುತ್ರ ಕಾಂತೇಶ್ ರಾಣೇಬೆನ್ನೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲವೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಅವರು ಸ್ವಗೃಹದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿ, ಯಾರೋ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ ಎಂದ ಮಾತ್ರಕ್ಕೆ ಉತ್ತರಿಸಲು ಸಾಧ್ಯವಿಲ್ಲ. ಇದೆಲ್ಲ ಅಭಿಮಾನಿಗಳ ಮತ್ತು ಪಕ್ಷದ ಕಾರ್ಯಕರ್ತರ ಒತ್ತಡ ಇರಬಹುದು ಆದರೆ ಅಂತಹ ಪ್ರಸ್ತಾವನೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಅನರ್ಹರ ಜೊತೆ ಮಾತನಾಡಲಾಗುವುದು
ಅನರ್ಹರ ವಿಚಾರಣೆ ಕುರಿತು ಮಾತನಾಡಿದ ಸಚಿವ ಈಶ್ವರಪ್ಪ  ಸಂಜೆಯೊಳಗೆ ಅರ್ಹರೆಲ್ಲಾ ಅರ್ಹರಾಗುತ್ತಾರೆ ಅನ್ನೋ ವಿಶ್ವಾಸವಿದೆ. ಸುಪ್ರೀಂನಿಂದ ಏನು ತೀರ್ಪು ಬರುತ್ತದೆ ಕಾದು ನೋಡುತ್ತೇವೆ. ಯಾರು ಬಿಜೆಪಿ ಸರ್ಕಾರ ಬರಲು ಸಹಕರಿಸಿದ್ದಾರೋ ಅಂತಹವರನ್ನ ಗುರುತಿಸಿ ಪಕ್ಷದ ವತಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುವುದು. ಅನರ್ಹರ ಜೊತೆ ಕುಳಿತು ಮಾತನಾಡಲಾಗುವುದು. ನಂತರ ಅಭ್ಯರ್ಥಿಯನ್ನ ಘೋಷಿಸಲಾಗುವುದು ಎಂದರು.
ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್...
ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ.
ಸಿದ್ದರಾಮಯ್ಯ ಏಜೆಂಟ್ ರಂತೆ ಅವರು ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು