ಸುದ್ದಿಲೈವ್/ಭದ್ರಾವತಿ
ಮಲೆನಾಡನಲ್ಲಿ ಮಳೆಯ ಹೈ ಅಲರ್ಟ್ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಮೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಈಗ ಮತ್ತೊಂದು ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ.
ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಅಧಿಕ ಮಳೆ ಹಿನ್ನಲೆಯಲ್ಲಿ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿತ್ತು. ಈಗ ಭದ್ರಾವತಿ ತಾಲೂಕಿನ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ.
0 ಕಾಮೆಂಟ್‌ಗಳು