ಸುದ್ದಿಲೈವ್/ಶಿವಮೊಗ್ಗ
ಸುದ್ದಿಲೈವ್/ಶಿವಮೊಗ್ಗ
ಮೀನುಗಾರಿಕೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾವಲಯ ಮತ್ತು ರಾಜ್ಯ ವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಇತ್ಯಾದಿ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ರಾಜ್ಯ ವಲಯ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ದಿ:30/08/2024 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಹಾಗೂ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸುವುದು.
ಇದನ್ನೂ ಓದಿ-https://suddilive.blogspot.com/2024/07/blog-post_29.html
0 ಕಾಮೆಂಟ್ಗಳು